ಕೂಡಿಗೆ, ಏ. 15: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆಹೊಸೂರು, ಜೇನುಕಲ್ಲುಬೆಟ್ಟ, ಗಂಗಾಕಲ್ಯಾಣ ಗ್ರಾಮಗಳಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಪಕ್ಷದ ವತಿಯಿಂದ ವಿಜಯಶಂಕರ್ ಪರ ಮತಯಾಚನೆ ಮಾಡಲಾಯಿತು.
ಈ ಸಂದರ್ಭ ರಾಜ್ಯ ಪರಿಶಿಷ್ಟ ಪಂಗಡದ ಉಪಾಧ್ಯಕ್ಷ ಎಸ್.ಎನ್.ರಾಜಾರಾವ್ ಮಾತನಾಡಿ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷವು ಗೆಲವು ಸಾಧಿಸುವ ಜೊತೆಗೆ ಗ್ರಾಮೀಣ ಪ್ರದೇಶದ ರೈತರ ಸಮಸ್ಯೆಗಳಿಗೆ ಇನ್ನೂ ಹೆಚ್ಚು ಸ್ಪಂದಿಸಲಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಐಎನ್‍ಟಿಯೂಸಿ ಅಧ್ಯಕ್ಷ ಟಿ.ಪಿ.ಹಮೀದ್, ಕೂಡಿಗೆ ಗ್ರಾ.ಪಂ ಮಾಜಿ ಅಧ್ಯಕ್ಷ ಟಿ.ಕೆ.ವಿಶ್ವನಾಥ್, ಕೂಡುಮಂಗಳೂರು ಸಹಕಾರ ಬ್ಯಾಂಕಿನ ನಿರ್ದೇಶಕ ರಮೇಶ್, ಪಕ್ಷದ ಪ್ರಮುಖರಾದ ರಾಜು, ಸತೀಶ್, ಹರ್ಷ, ಗೋಪಾಲ್, ಗಣೇಶ್, ಮೊಣ್ಣಪ್ಪ, ಪದ್ಮಾನಂದ, ವೆಂಕಟೇಶ್, ಚೇತನ್ ಸೇರಿದಂತೆ ಎರಡು ಪಕ್ಷದ ಕಾರ್ಯಕರ್ತರು ಇದ್ದರು.