ಶ್ರೀಮಂಗಲ, ಏ. 16: ಬಿರುನಾಣಿ ಗ್ರಾ.ಪಂ.ಮಾಜಿ ಸದಸ್ಯೆ ಮೀದೇರಿರ ಕವಿತಾ ರಾಮು ಅವರು ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೀತೀರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕಡೆಮಾಡ ಕುಸುಮ ಜೋಯಪ್ಪ,ಬಿರುನಾಣಿ ವಲಯ ಕಾಂಗ್ರೆಸ್ ಅಧ್ಯಕ್ಷ ಅಣ್ಣಳಮಾಡ ಲಾಲಾ ಅಪ್ಪಣ್ಣ,ಹುದಿಕೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್ ಇದ್ದರು.