ಕುಶಾಲನಗರ, ಏ. 16: ಕುಶಾಲನಗರ ಬಿಜೆಪಿ ಘಟಕದ ವತಿಯಿಂದ ಪಟ್ಟಣದಲ್ಲಿ ರೋಡ್ ಶೋ ನಡೆಸಲಾಯಿತು.
ಬೈಚನಹಳ್ಳಿ ಮಾರಿಯಮ್ಮ ದೇವಾಲಯದಿಂದ ಆರಂಭಗೊಂಡ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಿತು. ಕಾರ್ಯಕರ್ತರು ಬಿಜೆಪಿ ಮತ್ತು ಕೇಂದ್ರ ಸರಕಾರದ ಯೋಜನೆಯ ಘೋಷಣೆಗಳನ್ನು ಕೂಗುತ್ತಾ ಕರ ಪತ್ರಗಳು ಹಂಚುವ ಮೈಸೂರು-ಕೊಡಗು ಲೋಕಸಭಾ ಅಭ್ಯರ್ಥಿ ಪ್ರತಾಪ್ ಸಿಂಹ ಪರ ಮತಯಾಚನೆ ಮಾಡಿದರು. ಈ ಸಂದರ್ಭ ಬಿಜೆಪಿ ನಗರಾಧ್ಯಕ್ಷ ಕೆ.ಜಿ.ಮನು, ಮಂಡೇಪಂಡ ಬೋಸ್ ಮೊಣ್ಣಪ್ಪ, ಹಿರಿಯ ಮುಖಂಡ ಜಿ.ಎಲ್, ನಾಗರಾಜ್ ಸೇರಿದಂತೆ ಪಪಂ ಬಿಜೆಪಿ ಬೆಂಬಲಿತ ಸದಸ್ಯರು, ಕಾರ್ಯಕರ್ತರು ಇದ್ದರು.