ಮಡಿಕೇರಿ, ಏ. 16: ಜೆಡಿಎಸ್ ಪಕ್ಷದ ವತಿಯಿಂದ ಕೊಡಗು-ಮೈಸೂರು ಕ್ಷೇತ್ರದ ಮೈತ್ರಿ ಅಭ್ಯರ್ಥಿ ವಿಜಯ್‍ಶಂಕರ್ ಪರ ಮಡಿಕೇರಿಯಲ್ಲಿ ಪ್ರಚಾರ ನಡೆಸಲಾಯಿತು. ಜಿಲ್ಲಾಸ್ಪತ್ರೆ ಆವರಣದಿಂದ ಆರಂಭಗೊಂಡು ನಗರದ ವಿವಿಧ ಭಾಗಗಳಿಗೆ ತೆರಳಿ ಕರಪತ್ರ ನೀಡಿ ಮೈತ್ರಿ ಅಭ್ಯರ್ಥಿಗೆ ಮತ ಹಾಕುವಂತೆ ಮನವಿ ಮಾಡಿದರು.

ಈ ಸಂದರ್ಭ ಮಾತನಾಡಿದ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಯಾಲದಾಳು ಮನೋಜ್ ಬೋಪಯ್ಯ, ಸಮಾನತೆ ಇಲ್ಲದಿದ್ದರೆ ದೇಶದ ರಕ್ಷಣೆ ಮಾಡಲು ಸಾಧ್ಯವಿಲ್ಲ. ಜೆಡಿಎಸ್ ಮತ್ತು ಕಾಂಗ್ರೆಸ್‍ನಲ್ಲಿ ಮಾತ್ರ ಸಮಾನತೆಗೆ ಅವಕಾಶವಿದೆ ಎಂದರು. ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿಯವರು ರೈತರಿಗೆ ನೀಡಿದ್ದ ಭರವಸೆಗಳನ್ನು ಪೂರೈಸಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಹೆಚ್ಚಿನ ಮತ ಕ್ಷೇತ್ರವನ್ನು ಹೊಂದಿದ್ದು, ಮತದಾರರೇ ಅದನ್ನು ನಿರೂಪಿಸುತ್ತಾರೆ ಎಂದರು.

ಪರಿಶಿಷ್ಟ ಪಂಗಡದ ರಾಜ್ಯ ಉಪಾಧ್ಯಕ್ಷರಾದ ರಾಜಾರಾವ್ ಮಾತನಾಡಿ, ರಾಜ್ಯ ಮೈತ್ರ್ರಿ ಸರ್ಕಾರಕ್ಕೆ ಬಡವರ ಮೇಲೆ ಅಪಾರ ಕಾಳಜಿ ಇದೆ. ಸರ್ಕಾರ ಸುಭದ್ರವಾಗಿ ನಡೆಯುತ್ತಿದ್ದು, ರಾಜ್ಯದ ಜನತೆ ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡುತ್ತಿದ್ದಾರೆ ಹಾಗೆಯೇ ಪ್ರತಾಪ್ ಸಿಂಹ ಜಿಲ್ಲೆಯ ಜನರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ ಎಂದು ಆರೋಪಿಸಿದರು. ಈ ಸಂದರ್ಭ ಪಕ್ಷದ ಪ್ರಮುಖರಾದ ರಾಜೇಶ್ ಯಲ್ಲಪ್ಪ, ಚಂದ್ರಶೇಖರ್, ಶಬೀರ್ ಅಹಮ್ಮದ್, ಕಾರ್ಯಕರ್ತರು, ಕಾಂಗ್ರೆಸ್ ನಗರಾಧ್ಯಕ್ಷ ಅಬ್ದುಲ್ ರಜಾಕ್, ಸದಾ ಮುದ್ದಪ್ಪ ಇದ್ದರು.