ಮಡಿಕೇರಿ, ಏ. 16: ಟಿ.ಶೆಟ್ಟಿಗೇರಿ ಗ್ರಾಮ ಪಂಚಾಯಿತಿಗೆ ಒಳಪಟ್ಟ ನೆಮ್ಮಲೆ ಗ್ರಾಮದಲ್ಲಿ ಮನೆ ಮನೆ ಪ್ರಚಾರ ಕಾರ್ಯ ನಡೆಯಿತು. ಪ್ರತಾಪ್ ಸಿಂಹ ಪರ ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಕಟ್ಟೇರ ಈಶ್ವರ, ಗ್ರಾಮ ಪಂಚಾಯಿತಿ ಸದಸ್ಯ ರಂಜು ಕರುಬಂಯ್ಯ, ಸಹಕಾರ ಸಂಘದ ಮಾಜಿ ಅಧ್ಯಕ್ಷ ಕುಞಂಗಡ ಕೃಷ್ಣ, ವೀರಾಜಪೇಟೆ ವಿಧಾನಸಭಾ ಕ್ಷೇತ್ರ ಸಾಮಾಜಿಕ ಜಾಲತಾಣದ ಸಹ ಸಂಚಾಲಕ ಚೆಟ್ಟಂಗಡ ಮಹೇಶ್ ಮಂದಣ್ಣ ಹಾಗೂ ಇತರರು ಪಾಲ್ಗೊಂಡಿದ್ದರು.