ಕೂಡಿಗೆ, ಏ. 16 : ಕೂಡಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಲ್ಲೇನಹಳ್ಳಿ ಮತ್ತು ಮದಲಾಪುರ ಗ್ರಾಮಗಳಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಪಕ್ಷದ ವತಿಯಿಂದ ಪಕ್ಷಗಳ ಪ್ರಮುಖರು ಮತ್ತು ಕಾರ್ಯಕರ್ತರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿಜಯಶಂಕರ ಪರ ಮತಯಾಚನೆ ಮಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಮತದಾರರಿಗೆ ಮಾಹಿತಿಯ ಕರಪತ್ರ ನೀಡುವ ಮೂಲಕ ಮತಯಾಚನೆಯಲ್ಲಿ ತೊಡಗಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎನ್.ರಾಜಾರಾವ್, ಕೂಡಿಗೆ ಗ್ರಾ.ಪಂ ಸದಸ್ಯೆ ಪುಷ್ಪ, ಪಕ್ಷದ ಯೋಗೇಶ್, ಚಂದ್ರು, ಗಣೇಶ್, ಹರ್ಷ, ಗೋಪಾಲ್, ಮೊಣ್ಣಪ್ಪ, ಪದ್ಮಾನಂದ, ವೆಂಕಟೇಶ್, ಚೇತನ್ ಸೇರಿದಂತೆ ಎರಡು ಪಕ್ಷದ ಕಾರ್ಯಕರ್ತರು ಇದ್ದರು.