ಶನಿವಾರಸಂತೆ, ಏ. 16: ಲೋಕಸಭಾ ಚುನಾವಣಾ ಹಿನ್ನೆಲೆ ಸೋಮವಾರ ಸಂಜೆ ಬಿಎಸ್‍ಎಫ್‍ನ ಯೋಧರು, ಕೆಎಸ್‍ಆರ್‍ಪಿ ತುಕಡಿ, ಜಿಲ್ಲಾ ಸಶಸ್ತ್ರದಳ ಸ್ಥಳೀಯ ಪೊಲೀಸರು ಶನಿವಾರಸಂತೆ ಹಾಗೂ ಕೊಡ್ಲಿಪೇಟೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ನಡೆಸಿದರು.

ಈ ಸಂದರ್ಭ ವೃತ್ತ ನಿರೀಕ್ಷಕ ನಂಜುಂಡೇಗೌಡ, ಸೋಮವಾರಪೇಟೆ ಠಾಣಾಧಿಕಾರಿ ಶಿವಶಂಕರ್, ಶನಿವಾರಸಂತೆ ಠಾಣಾಧಿಕಾರಿ ತಿಮ್ಮಶೆಟ್ಟಿ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.