ಶನಿವಾರಸಂತೆ, ಏ. 16: ಶನಿವಾರಸಂತೆ ಹೋಬಳಿಯ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಕೂಟದ ವತಿಯಿಂದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿಜಯ ಶಂಕರ್ ಪರವಾಗಿ ಮನೆ ಮನೆ ಮತಯಾಚನೆ ನಡೆಸಿದರು.
ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್, ಜೆಡಿಎಸ್ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಎಂ.ಎ. ಆದಿಲ್ ಪಾಶಾ, ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಅಬ್ಬಾಸ್, ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ಎಸ್.ಸಿ. ಶರತ್ ಶೇಖರ್ ಇತರರ ಮತಯಾಚಿಸಿದರು.