ಮಡಿಕೇರಿ, ಏ.19 :ಜಿಲ್ಲಾ ಕೇಂದ್ರ ಮಡಿಕೇರಿಯ ಹೊಟೇಲ್ ಮ್ಯಾನೇಜ್‍ಮೆಂಟ್ ಕಾಲೇಜು ‘ಕೂರ್ಗ್ ಇನ್ಸ್‍ಸ್ಟಿಟ್ಯೂಟ್ ಆಫ್ ಹಾಸ್ಪಿಟಾಲಿಟಿ ಸೈನ್ಸ್’(ಸಿಐಹೆಚ್‍ಎಸ್) ಮೂರನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿರುವ ಹಂತದಲ್ಲಿ, ಜಿಲ್ಲೆಯ ಪ್ರಾಕೃತಿಕ ವಿಕೋಪ ಸಂತ್ರಸ್ತರ ಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡುವ ಕಾರ್ಯಕ್ಕೆ ಮುಂದಾಗಿದೆ.

ಸುದ್ದಿಗೋಷ್ಠಿಯಲ್ಲಿ ಸಿಐಹೆಚ್‍ಎಸ್‍ನ ವ್ಯವಸ್ಥಾಪಕಿ ಡಾ. ನಿರ್ಮಲ ಸೋಮಯ್ಯ ಮಾತನಾಡಿ, ಸಿಐಹೆಚ್‍ಎಸ್ ಹೊಟೇಲ್ ಮ್ಯಾನೇಜ್‍ಮೆಂಟ್ ಶಿಕ್ಷಣ ಸಂಸ್ಥೆ ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದಲ್ಲಿ 2017ರಲ್ಲಿ ಆರಂಭಗೊಂಡು ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಮಾಹಿತಿ ನೀಡಿದರು.

ಸಂಸ್ಥೆಯ ಕಾರ್ಯದರ್ಶಿ ದಿನೇಶ್ ಕಾರ್ಯಪ್ಪ, ಸಿಐಹೆಚ್‍ಎಸ್ ಕಾಲೇಜು ಜಿಲ್ಲೆಯ ವಿದ್ಯಾರ್ಥಿಗಳಿಗೆ ಪ್ರವಾಸೋದ್ಯಮ ಮತ್ತು ಆತಿಥ್ಯದಲ್ಲಿ ವಿಶೇಷ ತರಬೇತಿ ನೀಡುವ ಸಂಸ್ಥೆಯಾಗಿದ್ದು, ಪಿಯುಸಿಯಲ್ಲಿ ಕಲೆ, ವಾಣಿಜ್ಯ, ವಿಜ್ಞಾನ ಮತ್ತು ಡಿಪ್ಲೋಮೊ, ಐಟಿಐ ವಿದ್ಯಾರ್ಹತೆ ಪಡೆದವರಿಗೆ ಅವಕಾಶ ನೀಡಲಾಗುವದು. ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ವಿದ್ಯಾರ್ಥಿಗಳ ಸ್ಥಿತಿ ಅತಂತ್ರವಾಗಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ಸಂತ್ರಸ್ತರ ಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡಲು ತೀರ್ಮಾನಿಸಿರುವದಾಗಿ ತಿಳಿಸಿದರು.

ರಕ್ಷಣಾ ಪಡೆಗಳ ಯೋಧರ ಮಕ್ಕಳಿಗೆ ಅವರ ಶುಲ್ಕದಲ್ಲಿ ಶೇ. 10 ರಷ್ಟು ರಿಯಾಯಿತಿ ನೀಡಲು ನಿಧರ್Àರಿಸಿದ್ದು, ಪಿಯುಸಿ ಪರೀಕ್ಷೆಯಲ್ಲಿ ಶೇ. 75 ರಷ್ಟು ಅಂಕ ಪಡೆದ ಕೊಡಗಿನ ವಿದ್ಯಾರ್ಥಿಗಳಿಗೆ ಶೇ. 10 ರಷ್ಟು ಶುಲ್ಕ ವಿನಾಯಿತಿ ನೀಡಲಾಗುವದು ಎಂದರು.

ಸಂಸ್ಥೆಯ ಅಧ್ಯಕ್ಷ ರತನ್ ಕುಟ್ಟಯ್ಯ ಮಾತನಾಡಿ, ಸಿಐಹೆಚ್‍ಎಸ್ ಸಂಸ್ಥೆಯು 3 ವರ್ಷದ ಹೊಟೇಲ್ ಉದ್ಯಮದ ಪದವಿ ಶಿಕ್ಷಣವನ್ನು ನೀಡುತ್ತದೆ; ಕಾಲೇಜಿನÀಲ್ಲಿ 30 ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅವಕಾಶವಿದೆ ಎಂದು ಹೇಳಿದರು.