ಕೂಡಿಗೆ, ಏ. 22: ಕಳೆದ ಜನವರಿ ತಿಂಗಳಲ್ಲಿ ಬೀಟೆ ಮರ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಇಂದು ಸೋಮವಾರಪೇಟೆ ನಗರದಲ್ಲಿ ಬಂಧಿಸಲಾಗಿದೆ.

ಬಾಣಾವರ ಮೀಸಲು ಅರಣ್ಯ ಪ್ರದೇಶದಲ್ಲಿ ಬೀಟೆ ಮರ ಕಡಿದು ಸಾಗಾಟ ಮಾಡುತ್ತಿದ್ದ ಸಂದರ್ಭ ಪರಾರಿಯಾಗಿದ್ದ ರಮೇಶ್ ಎಂಬಾತನನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಬಾಣಾವರ ಉಪ ವಲಯ ಅರಣ್ಯಾಧಿಕಾರಿ ಮಹಾದೇವನಾಯಕ್ ಮತ್ತು ಸಿಬ್ಬಂದಿ ವರ್ಗ ಇದ್ದರು.