ಮಡಿಕೇರಿ, ಏ. 22: ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯವನ್ನು ನಿರ್ವಹಿಸ ಬೇಕಿರುವದರಿಂದ ಕ.ವಿ.ಪ್ರ.ನಿ.ನಿ. ಅವರ ಕೋರಿಕೆಯಂತೆ ತಾ. 25 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪೊನ್ನಂಪೇಟೆ, ವೀರಾಜಪೇಟೆ, ಶ್ರೀಮಂಗಲ, ಸಿದ್ದಾಪುರ ಹಾಗೂ ಮೂರ್ನಾಡು ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು.
ಆದ್ದರಿಂದ ಪೊನ್ನಂಪೇಟೆ, ಗೋಣಿಕೊಪ್ಪಲು, ನಲ್ಲೂರು, ಹುದಿಕೇರಿ, ತಿತಿಮತಿ, ಹಾತೂರು, ಪಾಲಿಬೆಟ್ಟ, ಶ್ರೀಮಂಗಲ, ಬಾಳಲೆ, ಕಾನೂರು, ಬಿರುನಾಣಿ, ಕುಟ್ಟ, ವಿರಾಜಪೇಟೆ, ಬಿ.ಶೆಟ್ಟಗೇರಿ, ಬೇತ್ರೀ, ಕಡಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಐಯ್ಯಂಗೇರಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಸೋಮಶೇಖರ ಕೋರಿದ್ದಾರೆ.