ಸಿದ್ದಾಪುರ, ಏ. 22 : ಗ್ಯಾಸ್ ಸಿಲಿಂಡರ್‍ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಸಮಯ ಪ್ರಜ್ಞೆಯಿಂದ ಭಾರಿ ಅಪಾಯ ತಪ್ಪಿದೆ. ಸಿದ್ದಾಪುರ ಪಟ್ಟಣದ ಮೈಸೂರು ರಸ್ತೆಯ ಅಂಗಡಿಯೊಂದರಲ್ಲಿ ಗ್ಯಾಸ್ ಸಿಲಿಂಡರ್‍ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅಂಗಡಿಯ ಮಾಲಿಕ ಹಾಗೂ ಸ್ಥಳೀಯ ಸಾರ್ವಜನಿಕರು ಬೆಂಕಿಯನ್ನು ನಂದಿಸಲು ಮುಂದಾಗಿದ್ದು, ಹರಸಾಹಸಪಟ್ಟರೂ ಬೆಂಕಿ ಹತೋಟಿಗೆ ಬಂದಿರಲಿಲ್ಲ. ಪ್ರಾಣದ ಹಂಗು ತೊರೆದು ಹೊತ್ತಿ ಉರಿಯುತ್ತಿದ್ದ ಗ್ಯಾಸ್ ಸಿಲಿಂಡರನ್ನು ಸ್ಥಳೀಯ ಆಟೋ ಚಾಲಕ ಜಲಿಲ್ ಹೊರ ತೆಗೆದು ನಂದಿಸುವಲ್ಲಿ ಯಶಸ್ವಿಯಾಗಿದ್ದಾನೆ. ಸಿಲಿಂಡರ್‍ನಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೈಸೂರು ರಸ್ತೆಯಲ್ಲಿ ಕೆಲಕಾಲ ಭಯದ ವಾತಾವರಣ ನಿರ್ಮಾಣವಾಗಿತ್ತು.ಆಟೋ ಚಾಲಕ ಜಲಿಲ್ ಹಾಗೂ ಸಾರ್ವಜನಿಕರ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಜಲೀಲ್ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.