ಕುಶಾಲನಗರ, ಏ. 23: ಕುಶಾಲನಗರದ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕೊಡಗು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಶಾಲಾ ಮಕ್ಕಳಿಗೆ ಬೇಸಿಗೆ ಸಂಭ್ರಮ ಕಾರ್ಯ ಕ್ರಮಕ್ಕೆ ಚಾಲನೆ ನೀಡಲಾಯಿತು.
ಜ್ಯೋತಿ ಬೆಳಗಿಸುವ ಮೂಲಕ ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಯ್ಯ ಚಾಲನೆ ನೀಡಿದರು.
ಮುಖ್ಯ ಶಿಕ್ಷಕಿ ರಾಣಿ, ಇಓಸಿ ರಾಧಾಕೃಷ್ಣ, ಬಿಆರ್‍ಪಿ ಲೋಕೇಶ್, ಸಿಆರ್‍ಪಿ ಸಂತೋಷ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ.ಟಿ. ಶ್ರೀನಿವಾಸ್, ಸದಸ್ಯ ಮಂಜುನಾಥ್, ಶಿಕ್ಷಕಿಯರು ಸೇರಿದಂತೆ ವಿದ್ಯಾರ್ಥಿಗಳು ಇದ್ದರು. ಶಿಬಿರ 3 ದಿನಗಳ ಕಾಲ ನಡೆಯಲಿದೆ.