ಮಡಿಕೇರಿ ಏ. 24 : ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳು ಹಾಗೂ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಸಭೆಯು ತಾ. 25 ರಂದು (ಇಂದು) ಬೆಳಿಗ್ಗೆ 11.30 ಗಂಟೆಯಿಂದ 1 ಗಂಟೆಯವರೆಗೆ ನಗರದ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ದಕ್ಷಿಣ ವಲಯ ಮೈಸೂರಿನ ಪೊಲೀಸ್ ಅಧೀಕ್ಷಕರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಹೆಚ್ಚಿನ ಮಾಹಿತಿಗೆ ಭ್ರಷ್ಟಾಚಾರ ನಿಗ್ರಹ ದಳ, ಪೊಲೀಸ್ ಠಾಣೆ, ಶಾಂತಿ ನಿಲಯ, ಕಾನ್ವೆಂಟ್ ಜಂಕ್ಷನ್, ಮಡಿಕೇರಿ-571201, ದೂ.ಸಂ : 08272-222100 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.