ಕುಶಾಲನಗರ, ಏ. 24: ಕುಶಾಲನಗರದ ಮಾತೆ ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ 93ನೇ ಮಹಾಆರತಿ ಕಾರ್ಯಕ್ರಮ ನಡೆಯಿತು. ಅಯ್ಯಪ್ಪಸ್ವಾಮಿ ದೇವಾಲಯ ಬಳಿ ನಡೆದ ಕಾರ್ಯಕ್ರಮದಲ್ಲಿ ಅರ್ಚಕ ಕೃಷ್ಣಮೂರ್ತಿ ಭಟ್ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿ ಮಹಾ ಆರತಿ ಬೆಳಗಿದರು. ಈ ಸಂದರ್ಭ ಶ್ರೀ ಗಣಪತಿ ದೇವಾಲಯ ಸಮಿತಿ ಅಧ್ಯಕ್ಷ ವಿ.ಎನ್. ವಸಂತಕುಮಾರ್, ಸಮಿತಿ ಪ್ರಮುಖರಾದ ಮಂಡೇಪಂಡ ಬೋಸ್ ಮೊಣ್ಣಪ್ಪ, ಬಿ.ಜೆ. ಅಣ್ಣಯ್ಯ, ವನಿತಾ ಚಂದ್ರಮೋಹನ್, ಕೆ.ಎಸ್. ಮೂರ್ತಿ ಮತ್ತಿತರರು ಇದ್ದರು. ಹುಣ್ಣಿಮೆ ಅಂಗವಾಗಿ ಕುಶಾಲನಗರ ಕೊಪ್ಪ ಗಡಿಭಾಗದ ಕಾವೇರಿ ಪ್ರತಿಮೆಗೆ ಅಭಿಷೇಕ ಮತ್ತು ಆರತಿ ಬೆಳಗಲಾಯಿತು. ಭಕ್ತಾದಿಗಳಿಗೆ ಅನ್ನದಾನ ಕಾರ್ಯಕ್ರಮ ನಡೆಯಿತು. ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಹುಣ್ಣಿಮೆ ಅಂಗವಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಿತು. ದೇವಾಲಯ ಸಮಿತಿ ಅಧ್ಯಕ್ಷ ಗಣಪತಿ, ಸಮಿತಿ ಸದಸ್ಯರು ಹಾಗೂ ಪೂಜಾ ಸೇವಾರ್ಥರರಾದ ಕುಶಾಲನಗರ ರಿಜಿಡ್ ಗ್ರೂಪ್ ಸದಸ್ಯರು ಇದ್ದರು.
ಈ ಸಂದರ್ಭ ಬಾರವಿ ಸಂಘದ ಪ್ರಮುಖರಾದ ಬಬೀಂದ್ರ ಪ್ರಸಾದ್, ರವೀಂದ್ರ ಪ್ರಸಾದ್, ವಿಜಯೇಂದ್ರ ಪ್ರಸಾದ್ ಮತ್ತಿತರರು ಇದ್ದರು. ಕುಶಾಲನಗರ ಸಾಯಿ ಬಡಾವಣೆಯ ಸಾಯಿ ಮಂದಿರದಲ್ಲಿ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು. ಸಾಯಿ ದೇವರಿಗೆ ಆರತಿ ಕಾರ್ಯಕ್ರಮ ನಡೆಯಿತು. ದೇವಾಲಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಜರುಗಿತು. ಭಕ್ತಾದಿಗಳಿಗೆ ಅನ್ನದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ದೇವಾಲಯ ಸಮಿತಿ ಅಧ್ಯಕ್ಷರಾದ ಧರೇಶ್ ಬಾಬು, ಎಸ್.ಎಲ್. ಶ್ರೀಪತಿ, ಓಬುಳ ರೆಡ್ಡಿ ಮತ್ತು ಸಮಿತಿ ಸದಸ್ಯರು ಇದ್ದರು.