ಕೂಡಿಗೆ, ಏ. 24: ಅಳುವಾರ ದಮ್ಮ ದೇವಾಲಯ ಸಮಿತಿಯ ವತಿಯಿಂದ ಅಳುವಾರದಮ್ಮ ವಾರ್ಷಿಕ ಹಬ್ಬ ಮತ್ತು ಜಾತ್ರೋತ್ಸವದ ಅಂಗವಾಗಿ ಪುರುಷರಿಗಾಗಿ ಮುಕ್ತ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಯನ್ನು ಆಯೋಜಿಸಲಾಗಿದ್ದು, ಪಂದ್ಯಾಟಕ್ಕೆ ತೊರೆನೂರು ಸಹಕಾರ ಬ್ಯಾಂಕಿನ ಅಧ್ಯಕ್ಷ ಕೆ.ಎಸ್. ಕೃಷ್ಣೇಗೌಡ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶದಲ್ಲಿ ಹಬ್ಬ ಹರಿದಿನಗಳ ಆಚರಣೆಯ ಪ್ರಯುಕ್ತ ಕ್ರೀಡಾಕೂಟಗಳನ್ನು ನಡೆಸುವದರಿಂದ ಸಾಮರಸ್ಯ ಮನೋಭಾವನೆ ಬೆಳೆಯು ವದರ ಜೊತೆಗೆ ಒಂದುಗೂಡುವಿಕೆಗೆ ಸಹಕಾರವಾಗುತ್ತದೆ ಎಂದರು.

ತೊರೆನೂರು ಸಹಕಾರ ಬ್ಯಾಂಕಿನ ನಿರ್ದೇಶಕ ಕುಶಾಲಪ್ಪ, ಚಿಕ್ಕಅಳುವಾರದ ಮಾಜಿ ಸೈನಿಕ ಯತೀಶ್, ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಹೆಚ್. ಪುಟ್ಟಸ್ವಾಮಿ, ಉಪಾಧ್ಯಕ್ಷ ಮಹಾದೇವಯ್ಯ, ಕಾರ್ಯದರ್ಶಿ ಶಿವಶಂಕರ್, ಸದಸ್ಯರಾದ ಸುರೇಶ್, ಜಗದೀಶ್, ಪ್ರಕಾಶ್ ಮತ್ತಿತರರು ಇದ್ದರು. ಪಂದ್ಯಾವಳಿಯು ಚಿಕ್ಕಳುವಾರ ಸ್ನಾತಕೋತ್ತರ ಕೇಂದ್ರದ ಮೈದಾನದಲ್ಲಿ ನಡೆಯಿತು. ಪಂದ್ಯಾಟದಲ್ಲಿ ಸುಮಾರು 10 ತಂಡಗಳು ಭಾಗವಹಿಸಿದ್ದವು.