ಮಡಿಕೇರಿ, ಏ. 25: ಜಿಲ್ಲೆಯಲ್ಲಿ ತಾ. 29 ಮತ್ತು 30 ರಂದು ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸಂತ ಜೋಸೆಫರ ಬಾಲಕಿಯರ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುತ್ತಿದ್ದು, ಈ ಪರೀಕ್ಷೆಗಳನ್ನು ಯಾವದೇ ಅಹಿತಕರ ಘಟನೆಗಳು ನಡೆಯದಂತೆ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ.