ಮಡಿಕೇರಿ, ಏ. 28: ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2019-20ನೇ ಸಾಲಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪರಿಶಿಷ್ಟ ಜಾತಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಲು ಅರ್ಜಿ ಆಹ್ವಾನಿಸ ಲಾಗಿದೆ. ಅರ್ಜಿ ಸಲ್ಲಿಸಲು ತಾ. 30 ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು 5 ನೇ ತರಗತಿಯಲ್ಲಿ ಶೇ. 60 ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ಆಯ್ಕೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಜಿಲ್ಲೆಯ ಪ್ರತಿಷ್ಠಿತ ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಅವಕಾಶವನ್ನು ಕಲ್ಪಿಸಲಾಗುವದು.

ವಿದ್ಯಾರ್ಥಿಗಳಿಂದ ಜಾತಿ ದೃಢೀಕರಣ ಪ್ರಮಾಣಪತ್ರ, ಆದಾಯ ದೃಢೀಕರಣ ಪತ್ರ ಹಾಗೂ ಮುಖ್ಯೋಪಾಧ್ಯಾಯರಿಂದ ದೃಢೀಕೃತಗೊಂಡ ಅಂಕಪಟ್ಟಿಯನ್ನು ಸಲ್ಲಿಸುವದು. ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಪೋಷಕರ ಆದಾಯ ಮಿತಿ ರೂ. 2 ಲಕ್ಷದ ಒಳಗೆ ಇರಬೇಕು. (ಈ ಬಗ್ಗೆ ತಹಶೀಲ್ದಾರರವರಿಂದ ಪಡೆದ ಆದಾಯ ಪ್ರಮಾಣ ಪತ್ರ ಸಲ್ಲಿಸುವದು).

ಅರ್ಜಿಯನ್ನು ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ-08272-225531, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ- 08272-223552, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ- 08276-281115 ಹಾಗೂ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ-08274-249476 ನ್ನು ಸಂಪರ್ಕಿಸಬಹುದು.