ಸೋಮವಾರಪೇಟೆ, ಮೇ2: ಎರಡು ವರ್ಷಗಳಿಗೊಮ್ಮೆ ನಡೆಯುವ ಚೌಡ್ಲು ಸುಗ್ಗಿ ತಾ. 3ರಂದು (ಇಂದು) ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ನಗರೂರು ಗ್ರಾಮದಲ್ಲಿರುವ ಸುಗ್ಗಿ ಕಟ್ಟೆಯಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದ ನಂತರ ಅಪರಾಹ್ನ 2 ಗಂಟೆಗೆ ಚೌಡ್ಲು ಗ್ರಾಮದ ಸುಗ್ಗಿಕಟ್ಟೆಯಲ್ಲಿ ಸುಗ್ಗಿ ಉತ್ಸವ ನಡೆಯಲಿದೆ ಎಂದು ಗ್ರಾಮಾಭಿವೃದ್ಧಿ ಸಮಿತಿ ಕಾರ್ಯದರ್ಶಿ ಮಹೇಶ್ ತಿಮ್ಮಯ್ಯ ತಿಳಿಸಿದ್ದಾರೆ.