ಮಡಿಕೇರಿ, ಮೇ 2: ಕೊಡಗು ಜಿಲ್ಲೆಯಲ್ಲಿ ಕಳೆದ ವರ್ಷ ಅತಿವೃಷ್ಟಿಯಿಂದ ಉಂಟಾಗಿದ್ದ ಪ್ರವಾಹ ಪ್ರಸಕ್ತ ವರ್ಷ ಮುಂಗಾರು ಮಳೆ ಪ್ರಾರಂಭವಾಗುತ್ತಿರುವ ಹಿನ್ನೆಲೆ ಮುಂಗಾರು ಮಳೆಯ ಮುಂಜಾಗ್ರತ ಕ್ರಮಗಳ ಬಗ್ಗೆ ಪರಿಶೀಲಿಸಲು ರಾಜ್ಯ ಮಟ್ಟದ ಅಧಿಕಾರಿಗಳ ತಂಡವು ತಾ. 3 ರಂದು (ಇಂದು) ಕೊಡಗು ಜಿಲ್ಲೆಗೆ ಭೇಟಿ ನೀಡಲಿದೆ. ಒಳಾಡಳಿತ ಇಲಾಖೆಯ ಸರ್ಕಾರದ ಅಪರ ಕಾರ್ಯದರ್ಶಿ, ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ವಿಭಾಗದ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು, ರಾಜ್ಯ ವಿಪತ್ತು ನಿರ್ವಹಣಾ ವಿಭಾಗದ ನಿರ್ದೇಶಕರ ತಂಡ ಭೇಟಿ ನೀಡಲಿದೆ.