ಸೋಮವಾರಪೇಟೆ,ಮೇ.2: ತಾಲೂಕು ಕಾಫಿ, ಕಾಳು ಮೆಣಸು, ಏಲಕ್ಕಿ ಬೆಳೆಗಾರರ ಹೋರಾಟ ಸಮಿತಿ ವತಿಯಿಂದ ತಾ. 7ರಂದು ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಬೆಳಿಗ್ಗೆ 10ಗಂಟೆಗೆ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಸಮಿತಿಯ ಕಾರ್ಯದರ್ಶಿ ಲಿಂಗೇರಿ ರಾಜೇಶ್ ತಿಳಿಸಿದ್ದಾರೆ.
ಸಭೆಯಲ್ಲಿ ಬೆಳೆಗಾರರ ಸಮಸ್ಯೆಗಳು ಹಾಗೂ ಉಚಿತ ವಿದ್ಯುತ್ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳನ್ನು ಭೇಟಿಯಾಗುವದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಮಾಹಿತಿಯಿತ್ತಿದ್ದಾರೆ.