ಸೋಮವಾರಪೇಟೆ, ಮೇ 2: ಶಾಂತಳ್ಳಿಯ ಪ್ರಕೃತಿ ಸಾಹಿತ್ಯ ಬಳಗ, ಬೆಂಗಳೂರಿನ ಶಾರದ ಪ್ರತಿಷ್ಠಾನ ಇವುಗಳ ಸಹಯೋಗದಲ್ಲಿ ತಾ. 6 ರಂದು ಶಾಂತಳ್ಳಿಯಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಮತ್ತು ಸಾರ್ವಜನಿಕರಿಗೆ ‘ಆಧ್ಯಾತ್ಮ ಚಿಂತನ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಾಹಿತ್ಯ ಬಳಗದ ಅಧ್ಯಕ್ಷೆ ರಾಧಿಕ ಕಾಳಪ್ಪ ತಿಳಿಸಿದ್ದಾರೆ.
ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸುವವರು ರಂಗೋಲಿ ಪುಡಿಯನ್ನು ಹೊರತುಪಡಿಸಿ ಯಾವದೇ ಬಣ್ಣಗಳನ್ನು ಬಳಸುವಂತಿಲ್ಲ. ಆಯ್ಕೆಯಾಗುವ ರಂಗೋಲಿಗಳಿಗೆ ಬಹುಮಾನಗಳನ್ನು ನೀಡಲಾಗುವದು. ಇದರೊಂದಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಸಾಹಿತಿ ಹುಲಿವಾನ ನರಸಿಂಹಸ್ವಾಮಿ ಅವರು ರಚಿಸಿರುವ ‘ತಳಿರು ತೋರಣ’ ಸಂಸ್ಕøತಿ ವಿಮರ್ಶೆಯ ಪುಸ್ತಕವನ್ನು ಬಿಡುಗಡೆ ಮಾಡಲಾಗುವದು ಎಂದು ಮಾಹಿತಿ.