ಮಡಿಕೇರಿ, ಮೇ 3: ತಾ. 3ರಂದು ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಬಳಿ ಹರಿಯುತ್ತಿರುವ ಕೊಳಚೆ ನೀರಿನ ತೋಡಿಗೆ ಅಂದಾಜು 35 ವರ್ಷ ಪ್ರಾಯದ ವ್ಯಕ್ತಿಯೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವ್ಯಕ್ತಿಯ ವಾರಸು ದಾರರಿದ್ದಲ್ಲಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.