ನಾಪೆÇೀಕ್ಲು, ಮೇ 3 : ತಾ. 4ರಿಂದ (ಇಂದು) 5ರ ವರೆಗೆ ನಾಪೆÇೀಕ್ಲು ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಕೊಡಗು ಜಿಲ್ಲಾ ಗೊಲ್ಲ ಯುವ ವೇದಿಕೆಯ ವತಿಯಿಂದ ವಾರ್ಷಿಕ ಕ್ರೀಡಾಕೂಟ ನಡೆಯಲಿದೆ.

ಬೆಳಿಗ್ಗೆ 9 ಗಂಟೆಗೆ ನಡೆಯಲಿರುವ ಉದ್ಘಾಟನೆಯನ್ನು ಕೊಡಗು ಜಿಲ್ಲಾ ಗೊಲ್ಲ ಸಮಾಜದ ಕ್ರೀಡಾ ಸಮಿತಿ ಅಧ್ಯಕ್ಷ ಕಡವಡಿರ ಸಂತೋಷ್ ನೆರವೇರಿಸಲಿರುವರು. ಈ ಸಂದರ್ಭದಲ್ಲಿ ಕ್ರೀಡಾ ಸಮಿತಿ ಉಪಾಧ್ಯಕ್ಷ ಅರೆಯಡ ಕುಶಾಲಪ್ಪ, ಕಾರ್ಯದರ್ಶಿ ತೊತ್ತಿಯಂಡ ಕಿರಣ್ ಉಪಸ್ಥಿತರಿರುವರು.

ಕ್ರೀಡಾಕೂಟದಲ್ಲಿ ಕ್ರಿಕೆಟ್ ಪಂದ್ಯಾಟ, ಮಹಿಳೆಯರಿಗೆ ಪಾಸಿಂಗ್ ಬಾಲ್, ಜನಾಂಗದ ಪ್ರಾಥಮಿಕ ಶಾಲಾ ಮಕ್ಕಳಿಗೆ ಆಟೋಟ ಸ್ಪರ್ಧೆ ನಡೆಯಲಿದೆ. 5ರಂದು ಫೈನಲ್ ಪಂದ್ಯಾಟ ನಡೆಯಲಿದೆ.