ಸೋಮವಾರಪೇಟೆ,ಮೇ.3: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಸೇರಿದಂತೆ ಇತರ ಇಲಾಖೆಗಳ ಸಹಯೋಗದಲ್ಲಿ ತಾ.4.ರಂದು (ಇಂದು) ಪಟ್ಟಣದ ಜೇಸೀ ವೇದಿಕೆಯಲ್ಲಿ ಪೂರ್ವಾಹ್ನ 10 ಗಂಟೆಗೆ ನೆರವು ನಮ್ಮದು-ನ್ಯಾಯ ನಿಮ್ಮದು ಕಾರ್ಯಕ್ರಮ ನಡೆಯಲಿದೆ.
ಇಲ್ಲಿನ ಜೆಎಂಎಫ್ ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಪರಶುರಾಮ್ ಎಫ್ ದೊಡ್ಡಮನಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ತಹಶೀಲ್ದಾರ್ ಗೋವಿಂದರಾಜು, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶಿವಕುಮಾರ್, ಪ.ಪಂ. ಮುಖ್ಯಾಧಿಕಾರಿ ನಟರಾಜ್, ಪೊಲೀಸ್ ವೃತ್ತ ನಿರೀಕ್ಷಕ ನಂಜುಂಡೇಗೌಡ ಸೇರಿದಂತೆ ಇತರ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಆಟೋ ಚಾಲಕರು, ವಾಹನ ಚಾಲಕರು ಮತ್ತು ಮಾಲೀಕರ ಸಂಘದ ಪದಾಧಿಕಾರಿಗಳು, ಸ್ತ್ರೀಶಕ್ತಿ ಸಂಘದ ಸದಸ್ಯರುಗಳು, ಮಕ್ಕಳು ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆಯಬೇಕೆಂದು ಕಾನೂನು ಸೇವಾ ಸಮಿತಿಯ ಪ್ರಕಟಣೆ ಮನವಿ ಮಾಡಿದೆ.
ತಾ.5 ರಂದು ಪೂರ್ವಾಹ್ನ 11.30ಕ್ಕೆ ಶನಿವಾರಸಂತೆಯಲ್ಲಿ, ಅಪರಾಹ್ನ 3.30ಕ್ಕೆ ಗೌಡಳ್ಳಿ ಸಮುದಾಯ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.