ಸಂಪಾಜೆ, ಜು. 9: ಸಂಪಾಜೆ ಗ್ರಾಮ ಪಂಚಾಯಿತಿಯ 2019-2020 ನೇ ಸಾಲಿನ ಗ್ರಾಮಸಭೆಯು ಪಯಶ್ವಿನಿ ಸಹಕಾರ ಸದನದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರ್ ಚೆದ್ಕಾರ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ನೋಡೆಲ್ ಅಧಿಕಾರಿ ಕೆ.ಎಸ್. ಚಂದ್ರಶೇಖರ್ ಅವರ ಸಮ್ಮುಖದಲ್ಲಿ ನಡೆಯಿತು. ಸಭೆಯಲ್ಲಿ ಹಿಂದಿನ ಸಭೆಯ ವರದಿ ಮಂಡನೆಯ ನಂತರ ವಿವಿಧ ಇಲಾಖೆಯ ಅಧಿಕಾರಿಗಳಿಂದ ತಮ್ಮ ಇಲಾಖೆಗೆ ಸಂಬಂಧಪಟ್ಟ ಯೋಜನೆಯ ಮಾಹಿತಿಯನ್ನು ಒದಗಿಸಿದರು. ಅಧ್ಯಕ್ಷರ ಅನುಮತಿಯ ಮೇರೆಗೆ ಇತರ ವಿಷಯಗಳ ಚರ್ಚೆಯಲ್ಲಿ ಪ್ರಪ್ರಥಮವಾಗಿ ಇತ್ತೀಚೆಗೆ ಹತ್ಯೆಯಾದ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷÀ ಬಾಲಚಂದ್ರ ಕಳಗಿ ಅವರ ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಗ್ರಾಮಸ್ಥರು ಒತ್ತಾಯ ಮಾಡಿದರು. ಗ್ರಾಮದಲ್ಲಿ ಉಂಟಾಗಿರುವ ಬಿ.ಎಸ್.ಎನ್.ಎಲ್ ಟವರ್ ಸಮಸ್ಯೆಯ
(ಮೊದಲ ಪುಟದಿಂದ) ಬಗ್ಗೆ ಸಮಾಲೋಚನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು. ಗ್ರಾಮದಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕೆಲಸ ಹಾಗೂ ಸಂಪಾಜೆ ಗ್ರಾಮದ ವಿವಿಧ ಇಲಾಖೆಯಲ್ಲಿ ಉಂಟಾಗಿರುವ ಸಮಸ್ಯೆ ಬಗ್ಗೆ ಸಮಾಲೋಚನೆ ನಡೆಸಿ ಗ್ರಾಮಸ್ಥರಿಂದ ಅರ್ಜಿ ಸ್ವೀಕಾರ ಅಧ್ಯಕ್ಷರ ಸಮ್ಮುಖದಲ್ಲಿ ನಡೆಯಿತು. ಸಭೆಯಲ್ಲಿ ತಾಲೂಕು ಪಂಚಾಯತ್ ಸದಸ್ಯ ನಾಗೇಶ್ ಕುಂದಲ್ಪಾಡಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷÀ ಸುಂದರ ಬಿಸಿಲುಮನೆ, ಅಭಿವೃದ್ಧಿ ಅಧಿಕಾರಿ ಶೋಭಾರಾಣಿ ಸದಸ್ಯರುಗಳು ಹಾಗೂ ಸಂಪಾಜೆಯ ಸಮಸ್ತ ಗ್ರಾಮಸ್ಥರು ಭಾಗವಹಿಸಿದ್ದರು.