ಮಡಿಕೇರಿ, ಜು. 11: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ವಿಶ್ವ ಕೌಶಲ್ಯ ದಿನಾಚರಣೆಯ ಪ್ರಯುಕ್ತ ತಾ. 15 ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉದ್ಯೋಗ ಮೇಳ ನಡೆಯಲಿದೆ.

ಈ ಉದ್ಯೋಗ ಮೇಳದಲ್ಲಿ 10 ರಿಂದ 15 ಖಾಸಗಿ ಸಂಸ್ಥೆಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ವಾಹನ ಚಾಲನ ಪರವಾನಗಿ ಹಾಗೂ ಯಾವದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸ ಬಹುದಾಗಿರು ತ್ತದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಹಾಜರಾಗುವಂತೆ ತಿಳಿಸಿದೆ. ಉದ್ಯೋಗ ಮೇಳದಲ್ಲಿ ಉದ್ಯೋಗಾ ಕಾಂಕ್ಷಿಗಳಿಗೆ ನೀಡಲಾಗುವ ಸೌಲಭ್ಯ ಗಳು ಉಚಿತವಾಗಿದ್ದು ಯಾವದೇ ಶುಲ್ಕ ಪಾವತಿಸುವಂತಿಲ್ಲ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.