ಸಿದ್ದಾಪುರ, ಜು. 11: ಪೊಲೀಸ್ ಠಾಣೆ ವತಿಯಿಂದ ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ ಹಾಗೂ ಸಂಚಾರಿ ಸುರಕ್ಷತಾ ಜಾಗೃತಿ ಅಭಿಯಾನವನ್ನು ಸಿದ್ದಾಪುರ ಗ್ರಾ.ಪಂ. ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.
ಮಡಿಕೇರಿ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಮಾತನಾಡಿ, ಆಟೋ ಸೇರಿದಂತೆ ವಾಹನ ಚಾಲಕರು ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸಂದರ್ಭ ಎಚ್ಚರಿಕೆ ವಹಿಸಬೇಕು. ನಿಗದಿತ ಜನರಿಗಿಂತ ಹೆಚ್ಚು ಜನರನ್ನು ಹತ್ತಿಸಬಾರದು ಎಂದರು. ಆಟೋ ಚಾಲಕರು ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸಬೇಕು ಹಾಗೂ ಸಾಮಾಜಿಕ ಜವಾಬ್ದಾರಿಯಿಂದ ಕೆಲಸ ಮಾಡಬೇಕೆಂದು ಕರೆ ನೀಡಿದರು. ಕಾನೂನು ಉಲ್ಲಂಘಿಸಿದರೆ ಕ್ರಮ ಕೈಗೊಳ್ಳುವದಾಗಿ ಎಚ್ಚರಿಸಿದರು.
ಯುವಕರು ಗಾಂಜಾ ಸೇದುತ್ತಿರುವ ಬಗ್ಗೆ ಹಲವು ದೂರುಗಳು ಬಂದಿದ್ದು, ಈ ಬಗ್ಗೆ ಗಮನಕ್ಕೆ ಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು. ಅಪಾಯ ಸಂಭವಿಸುವ ಮುಂಚೆ ಪೊಲೀಸರಿಗೆ ಮಾಹಿತಿ ನೀಡಿ ಕೃತ್ಯ ನಡೆಯದಂತೆ ಸಹಕರಿಸಬೇಕು ಎಂದರು.
ಸಭೆಯಲ್ಲಿ ಠಾಣಾಧಿಕಾರಿ ದಯಾನಂದ್, ಆಟೋ ಚಾಲಕರ ಸಂಘದ ಅಧ್ಯಕ್ಷ ಸಲೀಂ ಸೇರಿದಂತೆ ಇತರ ಆಟೋ ಚಾಲಕರು ಪಾಲ್ಗೊಂಡಿದ್ದರು.ನಾಪೆÇೀಕ್ಲು: ನಾಪೆÇೀಕ್ಲು ಪಟ್ಟಣದಲ್ಲಿ ಪೆÇಲೀಸ್ ಇಲಾಖೆಯ ವತಿಯಿಂದ ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ಮತ್ತು ರಸ್ತೆ ಸುರಕ್ಷತಾ ಸಪ್ತಾಹ ಜಾಥಾ ನಡೆಯಿತು.
ಜಾಥಾದಲ್ಲಿ ಡಿವೈಎಸ್ಪಿ ಸುಂದರ್ ರಾಜ್, ಮಡಿಕೇರಿ ಗ್ರಾಮಾಂತರ ಠಾಣಾ ವೃತ್ತ ನಿರೀಕ್ಷಕ ಸಿದ್ದೇಶ್, ನಾಪೆÇೀಕ್ಲು ಠಾಣಾಧಿಕಾರಿ ನಂಜುಂಡ ಸ್ವಾಮಿ, ಸಿಬ್ಬಂದಿಗಳು, ನಾಪೆÇೀಕ್ಲು ಕರ್ನಾಟಕ ಪಬ್ಲಿಕ್ ಶಾಲಾ ವಿದ್ಯಾರ್ಥಿಗಳು, ಶಿಕ್ಷಕಿ ಕಸ್ತೂರಿ ಪಾಲ್ಗೊಂಡಿದ್ದರು.