ಮಡಿಕೇರಿ, ಜು. 11: 2018-19ನೇ ಸಾಲಿನಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರು ಮಾಡಲು ಇಲಾಖಾ ವೆಬ್‍ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 2019ರ ಡಿಸೆಂಬರ್ 31 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್, ವೈದ್ಯಕೀಯ ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪ್ರತಿ ಸೆಮಿಸ್ಟರ್‍ನಲ್ಲಿ ಶೇ. 60 ಕ್ಕಿಂತ ಹೆಚ್ಚು ಅಂಕಗಳಿಸಿರಬೇಕು. ತಾಂತ್ರಿಕ ಶಿಕ್ಷಣ ನಿರ್ದೇಶನಾಲಯದಡಿಯಲ್ಲಿ 3 ವರ್ಷಗಳ ಪಾಲಿಟೆಕ್ನಿಕ್, ಡಿಪ್ಲೊಮಾ ಕೋರ್ಸುಗಳ ಅಂತಿಮ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಶೇ. 60 ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ಅರ್ಜಿ ಸಲ್ಲಿಸಲು ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-08272-225531, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ 08272-223552, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-08276-281115 ಮತ್ತು ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ-08274-249476 ನ್ನು ಸಂಪರ್ಕಿಸಬಹುದು.