ಕುಶಾಲನಗರ, ಜು. 10: ರಾಜ್ಯದ ಬಿಜೆಪಿ ಪಕ್ಷ ಸಮ್ಮಿಶ್ರ ಸರಕಾರವನ್ನು ವಾಮಮಾರ್ಗದ ಮೂಲಕ ಉರುಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಿತು.

ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ನೇತೃತ್ವದಲ್ಲಿ ಪ್ರತಿಭಟಿಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ವಿರುದ್ಧ ಆಕ್ರೋಷ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯದ ಯಡಿಯೂರಪ್ಪ ಸಮ್ಮಿಶ್ರ ಸರಕಾರವನ್ನು ಕೆಡವಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಘೋಷಣೆಗಳನ್ನು ಕೂಗಲಾಯಿತು.

ಪಕ್ಷದ ನಗರಾಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಪಪಂ ಸದಸ್ಯ ಪ್ರಮೋದ್ ಮುತ್ತಪ್ಪ, ಪ್ರಮುಖರಾದ ಹೆಚ್.ಜೆ.ಕರಿಯಪ್ಪ, ಅಬ್ದುಲ್ ಖಾದರ್, ಹಮೀದ್, ಫಿಲೋಮಿನಾ, ಎಂ.ಡಿ.ರಮೇಶ್ ಮತ್ತಿತರರು ಇದ್ದರು.