ಮಡಿಕೇರಿ, ಜು. 11: ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ ಸಭೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅಧ್ಯಕ್ಷತೆಯಲ್ಲಿ ಇತ್ತಿಚೆಗೆ ನಡೆಯಿತು.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಚ್ಚಾಡೋ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆಂಚಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗಾಯತ್ರಿ, ನಾಗರಾಜಯ್ಯ, ಶ್ರೀಶೈಲ ಬೀಳಗಿ, ದೈಹಿಕ ಶಿಕ್ಷಣ ಅಧಿಕಾರಿ ವೆಂಕಟೇಶ್, ಜಿ.ಪಂ. ಸಹಾಯಕ ಕಾರ್ಯದರ್ಶಿ ಬಾಬು, ಜಿ.ಪಂ. ಇಇ ಶ್ರೀಕಂಠಯ್ಯ ಇತರರು ಇದ್ದರು.
ರಾಜ್ಯ ಪಠ್ಯಕ್ರಮದ ಮತ್ತು ಐಸಿಎಸ್‍ಇ. ಪಠ್ಯಕ್ರಮ ಪಾಲನೆ ಮಾಡುತ್ತಿರುವ ಎಲ್ಲಾ ಅನುದಾನರಹಿತ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಪಡೆಯುತ್ತಿರುವ ಶುಲ್ಕದ ವಿವರಗಳನ್ನು ಶಾಲೆಯ ಸೂಚನಾ ಫಲಕದಲ್ಲಿ ಪ್ರಕಟಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಬಿ.ಇಡಿ-ಡಿಇಡಿ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರು ಕಡ್ಡಾಯವಾಗಿ ಇರುವ ಬಗ್ಗೆ ವಿದ್ಯಾರ್ಥಿಗಳ ಸುರಕ್ಷತೆಯ ಕುರಿತು ಚರ್ಚೆ ನಡೆಯಿತು.