ಸೋಮವಾರಪೇಟೆ, ಜು. 11: ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯನ್ನು ತಾಲೂಕಿನ ಎಲ್ಲಾ ಶಾಲೆಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸುವಂತಾಗಬೇಕೆಂದು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ನಿರ್ದೇಶಕಿ ನಳಿನಿ ಗಣೇಶ್ ಅಭಿಪ್ರಾಯಿಸಿದರು.

ಇಲ್ಲಿನ ಚನ್ನಬಸಪ್ಪ ಸಭಾಂಗಣ ದಲ್ಲಿ ಆಯೋಜಿಸಿದ್ದ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ, ಅವರು ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಹಿರಿಯ ಗೈಡ್ಸ್ ಕ್ಯಾಪ್ಟನ್ ಅಣ್ಣಮ್ಮ ಮಾತನಾಡಿ, ಪ್ರತಿಯೊಬ್ಬ ಶಿಕ್ಷಕರು ಸಮಾನತೆಯನ್ನು ಮೈಗೂಡಿಸಿ ಕೊಳ್ಳುವ ಮೂಲಕ ಜವಾಬ್ದಾರಿ ನಿಭಾಯಿಸಬೇಕೆಂದು ಕರೆ ನೀಡಿದರು.

ಶಿಕ್ಷಕರ ಸಂಘದ ಕಾರ್ಯದರ್ಶಿ ಬಸವರಾಜು ಮಾತನಾಡಿ, ಸ್ಕೌಟ್ಸ್ ಹಾಗೂ ಗೈಡ್ಸ್ ಸೇವೆಗೆ ಸದಾ ಸಿದ್ದ ಎಂಬದು ಶಾಲಾ ವ್ಯಾಪ್ತಿಯಲ್ಲಿ ನಡೆಯುವ ಸಭೆ-ಸಮಾರಂಭಗಳಿಂದ ಹಾಗೂ ಜನಪರ ಸೇವಾ ಕಾರ್ಯಕ್ರಮಗಳಲ್ಲಿ ಸಾಬೀತಾಗುತ್ತಿದೆ ಎಂದು ಶ್ಲಾಘಿಸಿದರು.

ಸಭೆಗೆ ವೀಕ್ಷಕರಾಗಿ ಆಗಮಿಸಿದ್ದ ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಸ್ವಯಂ ಸೇವಕಿ ರಂಜಿನಿ ಹಾಗೂ ಜಿಲ್ಲಾ ಗೈಡ್ಸ್ ತರಬೇತಿ ಆಯುಕ್ತ ಎನ್.ಎಲ್. ಸುರೇಶ್‍ಕುಮಾರ್ ತರಬೇತಿಗಳ ಬಗ್ಗೆ ಮಾಹಿತಿ ನೀಡಿದರು.

ಸಭೆಯ ಅಧ್ಯಕ್ಷತೆಯನ್ನು ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಬಿ.ಎ. ಭಾಸ್ಕರ್ ವಹಿಸಿದ್ದರು.

ವೇದಿಕೆಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಟಿ.ಎಸ್. ಚಂದ್ರಶೇಖರ್, ಖಜಾಂಚಿ ಕೆ.ಟಿ. ಚಂದ್ರಕಲಾ ಉಪಸ್ಥಿತರಿದ್ದರು. ಗೈಡ್ಸ್ ಕ್ಯಾಪ್ಟನ್ ಡಿ.ಎಸ್. ಆಶಾ ವರದಿ ವಾಚಿಸಿದರು, ಸ್ಕೌಟ್ಸ್ ಮಾಸ್ಟರ್ ಎಂ.ಎಸ್. ಗಣೇಶ್ ವಂದಿಸಿದರು.