ಕುಶಾಲನಗರ, ಜು. 12: ಕುಶಾಲನಗರ ಪಟ್ಟಣದಲ್ಲಿ ನೆಹರು ಬಡಾವಣೆಯಲ್ಲಿ ಕಂಡುಬಂದ ಡೆಂಗ್ಯೂ ರೋಗದ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯಿತಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಬಡಾವಣೆಗಳಲ್ಲಿ ಸ್ವಚ್ಛತೆ ಕಾರ್ಯ ನಡೆಸುವದರೊಂದಿಗೆ ಸೊಳ್ಳೆಗಳ ನಿಯಂತ್ರಣಕ್ಕೆ ಫಾಗ್ ಸ್ಪ್ರೆ ಮತ್ತಿತರ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಾಧಿಕಾರಿ ಸುಜಯ್‍ಕುಮಾರ್ ತಿಳಿಸಿದ್ದಾರೆ.

ಡೆಂಗ್ಯೂ ಬಾಧಿತ ಯುವತಿ ಚೇತರಿಸಿಕೊಳ್ಳುತ್ತಿರುವದಾಗಿ ಕುಟುಂಬ ಮೂಲಗಳಿಂದ ತಿಳಿದು ಬಂದಿದೆ.