ಕುಶಾಲನಗರ, ಜು. 12: ರಾಜ್ಯ ಉಚ್ಚ ನ್ಯಾಯಾಲಯದ ಆದೇಶದ ಮೇರೆಗೆ ಕುಶಾಲನಗರ ಗೌಡ ಸಮಾಜ ಬಳಿ ಬಡಾವಣೆಗೆ ನೂತನ ರಸ್ತೆ ನಿರ್ಮಾಣಕ್ಕೆ ಸೋಮವಾರಪೇಟೆ ತಹಶೀಲ್ದಾರ್ ಚಾಲನೆ ನೀಡಿದರು. ಸರ್ವೆ ನಂ 29/1 ರಲ್ಲಿ ರಸ್ತೆಯನ್ನು ವ್ಯಕ್ತಿಯೊಬ್ಬರು ಒತ್ತುವರಿ ಮಾಡಿರುವ ಬಗ್ಗೆ ಸ್ಥಳೀಯ ನಿವಾಸಿ ಆನಂದ್ ಕರಂದ್ಲಾಜೆ ಎಂಬವರು ಸೋಮವಾರಪೇಟೆ ತಹಶೀಲ್ದಾರ್ ವಿರುದ್ಧ ಹೈಕೋರ್ಟ್‍ನಲ್ಲಿ ದೂರು ಸಲ್ಲಿಸಿದ್ದು ಈ ಹಿನ್ನೆಲೆಯಲ್ಲಿ ಸುಮಾರು 600 ಅಡಿ ಉದ್ದದ ಹಾಗೂ 35 ಅಡಿ ಅಗಲದ ಸಾರ್ವಜನಿಕ ರಸ್ತೆ ನಿರ್ಮಾಣಕ್ಕೆ ನ್ಯಾಯಾಲಯ ಆದೇಶ ನೀಡಿದೆ. ಈ ಸಂಬಂಧ ಸೋಮವಾರಪೇಟೆ ತಹಶೀಲ್ದಾರ್ ಗೋವಿಂದರಾಜು ಅವರ ನೇತೃತ್ವದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ನಡೆಯಿತು.