ಮಡಿಕೇರಿ, ಜು.12: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಉದ್ಯೋಗ ನೋಂದಣಿ ಶಿಬಿರಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಎಸ್.ಎಸ್.ಎಲ್.ಸಿ. ಅನುತ್ತೀರ್ಣ, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಮತ್ತು ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಶಾಲೆಯಿಂದ ಪಡೆದ ವರ್ಗಾವಣೆ ಪ್ರಮಾಣಪತ್ರ ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣ ಗೊಂಡವರಿಗೆ/ಎಸ್.ಎಸ್.ಎಲ್.ಸಿ ಮೂಲ ಅಂಕಪಟ್ಟಿ, ಪಿ.ಯು.ಸಿ. ಮೂಲ ಪ್ರತಿ ಮತ್ತು ನಕಲು ಪ್ರತಿ, ಪದವಿಯ ಎಲ್ಲಾ ಸೆಮಿಸ್ಟರ್‍ಗಳ ಅಂಕಪಟ್ಟಿ, ಐ.ಟಿ.ಐ, ಅಥವಾ ಡಿಪ್ಲೋಮಾ ಮೂಲ ಅಂಕಪಟ್ಟಿಗಳು, ಜಾತಿ ದೃಢೀಕರಣ ಪತ್ರ, ಎರಡು ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳನ್ನು ದಾಖಲಾತಿಗಳ ಮೂಲಪ್ರತಿ ಹಾಗೂ ನಕಲು ಪ್ರತಿಗಳೊಂದಿಗೆ ತಾ. 18 ರಂದು ಕೊಡ್ಲಿಪೇಟೆ, ಪ್ರಥಮ ದರ್ಜೆ ಕಾಲೇಜು, ತಾ. 23, ಬಿ.ಟಿ.ಜಿ.ಸಿ. ಪ್ರಥಮ ದರ್ಜೆ ಕಾಲೇಜು, ಯಡೂರು, ತಾ. 25 ಸರ್ಕಾರಿ ಪದವಿ ಪೂರ್ವ ಕಾಲೇಜು, ಸುಂಟಿಕೊಪ್ಪಗಳಲ್ಲಿ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಭ್ಯರ್ಥಿಗಳು ಸ್ಥಳದಲ್ಲಿ ಹಾಜರಿದ್ದು, ಉದ್ಯೋಗ ನೋಂದಣಿಯನ್ನು ಮಾಡಿಸಿಕೊಳ್ಳಲು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ತಿಳಿಸಿದ್ದಾರೆ.