ಮಡಿಕೇರಿ, ಜು. 12: ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ಐಐಟಿ, ಐಐಎಂ, ಎನ್ಐಟಿ ಮತ್ತಿತರ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದಂತಹ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ ಕೋರ್ಸ್ ಅವಧಿಯಲ್ಲಿ ಒಂದು ಬಾರಿ ತಲಾ 2 ಲಕ್ಷ ರೂ. ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಇಲಾಖಾ ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಸಿ, ನಂತರ ಆಫ್ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಿ ನಿಗಧಿತ ಅರ್ಜಿಗಳೊಂದಿಗೆ ಬೆಂಗಳೂರಿನ ಕೇಂದ್ರ ಕಚೇರಿಗೆ ಸಲ್ಲಿಸಲು ಸೂಚಿಸಿದೆ.
ಅಲ್ಪಸಂಖ್ಯಾತರ ನಿರ್ದೇಶ ನಾಲಯ ಬೆಂಗಳೂರು ಇವರ ವತಿಯಿಂದ ಪತ್ರಿಕೋದ್ಯಮ ಮತ್ತು ಸಂವಹನ ತರಬೇತಿ ಪಡೆಯಲು ಪ್ರೋತ್ಸಾಹಧನಕ್ಕೆ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ, ನಂತರ ಭರ್ತಿ ಮಾಡಿದ ಅರ್ಜಿಗಳನ್ನು ನಿಗಧಿತ ದಾಖಲಾತಿಗಳೊಂದಿಗೆ ಜಿಲ್ಲಾ ಕಚೇರಿಗೆ ಸಲ್ಲಿಸಲು ಕೋರಿದೆ. ಹೆಚ್ಚಿನ ಮಾಹಿತಿಗಾಗಿ ತಿತಿತಿ.goಞಜom.ಞಚಿಡಿ.ಟಿiಛಿ.iಟಿ, ದೂರವಾಣಿ ಸಂಖ್ಯೆ 08272-225528, 220214 ನ್ನು ಸಂಪರ್ಕೀಸಬೇಕಾಗಿ ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.