ಕುಶಾಲನಗರ, ಜು. 12: ಸಂಖ್ಯಾಬಲದ ಕೊರತೆ ಎದುರಿಸುತ್ತಿರುವ ಸಮ್ಮಿಶ್ರ ಸರಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೈತಿಕ ಹೊಣೆ ಹೊತ್ತು ತಕ್ಷಣ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕುಶಾಲನಗರ ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ ನಡೆಯಿತು.

ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರು ಸಮ್ಮಿಶ್ರ ಸರಕಾರ ಮತ್ತು ಸ್ಪೀಕರ್ ವಿರುದ್ಧ ಧಿಕ್ಕಾರ ಕೂಗಿದರು.

ಈ ಸಂದರ್ಭ ಮಾತನಾಡಿದ ಬಿಜೆಪಿ ನಗರಾಧ್ಯಕ್ಷ ಕೆ.ಜಿ.ಮನು, ಸಮ್ಮಿಶ್ರ ಸರಕಾರದ ಶಾಸಕರುಗಳು ಸ್ವಇಚ್ಚೆಯಿಂದ ರಾಜೀನಾಮೆ ನೀಡಿದ್ದಾರೆ. ಸಂಖ್ಯಾಬಲ ಕೊರತೆಯಿದ್ದರೂ ಕೂಡ ಮುಖ್ಯಮಂತ್ರಿಗಳು ಆಡಳಿತ ನಡೆಸುತ್ತಿರುವದು ನಗೆÀಪಾಟಲಿಗೀಡುಮಾಡುವ ವಿಚಾರವಾಗಿದೆ. ಮುಖ್ಯಮಂತ್ರಿ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿ.ಪಂ. ಸದಸ್ಯೆ ಮಂಜುಳಾ, ಪ.ಪಂ. ಸದಸ್ಯ ಅಮೃತ್‍ರಾಜ್, ಡಿ.ಕೆ. ತಿಮ್ಮಪ್ಪ, ರೂಪಾ ಉಮಾಶಂಕರ್, ಬಿಜೆಪಿ ಪ್ರಮುಖರಾದ ಎಂ.ಎನ್. ಕುಮಾರಪ್ಪ, ಜಿ.ಎಲ್. ನಾಗರಾಜ್, ಪಿ.ಪಿ. ಸತ್ಯನಾರಾಯಣ, ಎಂ.ಡಿ. ಕೃಷ್ಣಪ್ಪ, ಮಂಡೇಪಂಡ ಬೋಸ್ ಮೊಣ್ಣಪ್ಪ, ಶಿವಾಜಿ, ನವನೀತ್, ಉಮಾಶಂಕರ್, ವರದ, ಶಿವಕುಮಾರ್ ವೈಶಾಖ್ ಮತ್ತಿತರರು ಇದ್ದರು.