ಮಡಿಕೇರಿ, ಸೆ. 16: ಮೈಸೂರು ಆಡಳಿತ ತರಬೇತಿ ಸಂಸ್ಥೆ ಹಾಗೂ ಕೊಡಗು ಜಿಲ್ಲಾ ವಿಕೋಪ ನಿರ್ವಹಣಾ ಪ್ರಾಧಿಕಾರದ ವತಿಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಕಾರದಲ್ಲಿ ತಾ. 17 ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ‘ವಿಕೋಪ ನಿರ್ವಹಣೆಯಲ್ಲಿ ಮಾಧ್ಯಮಗಳ ಪಾತ್ರ’ ಕುರಿತು ಕಾರ್ಯಾಗಾರವು ನಗರದ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ.

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಕಾರ್ಯಾಗಾರಕ್ಕೆ ಚಾಲನೆ ನೀಡಲಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ., ಜಿ.ಪಂ. ಸಿಇಒ ಕೆ.ಲಕ್ಷ್ಮೀಪ್ರಿಯಾ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಸವಿತಾ ರೈ, ಆಡಳಿತ ತರಬೇತಿ ಸಂಸ್ಥೆಯ ತರಬೇತಿ ನಿರ್ದೇಶಕ ಡಾ.ಎಂ. ದಿಲೀಪ್‍ಕುಮಾರ್ ಇತರರು ಪಾಲ್ಗೊಳ್ಳಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದ ನಂತರ ವಿಕೋಪ ನಿರ್ವಹಣೆಯಲ್ಲಿ ಮಾಧ್ಯಮಗಳ ಪಾತ್ರ ಕುರಿತು ವಿಕೋಪಕ್ಕೂ ಮೊದಲು, ವಿಕೋಪದ ವೇಳೆ, ವಿಕೋಪದ ನಂತರ ಬಗ್ಗೆ ತರಬೇತಿ ನಿರ್ದೇಶಕ ಡಾ.ದಿಲೀಪ್ ಕುಮಾರ್ ಮಾತನಾಡಲಿದ್ದಾರೆ.

ಕೊಡಗು ಪ್ರೆಸ್‍ಕ್ಲಬ್ ಅಧ್ಯಕ್ಷ ಎ.ಆರ್. ಕುಟ್ಟಪ್ಪ ಅವರು ವಿಕೋಪ ಹೊಣೆಗಾರಿಕೆಯ ತತ್ವ ಮತ್ತು ಸವಾಲುಗಳು ಹಾಗೂ ವಿಕೋಪ ಸಂದರ್ಭದಲ್ಲಿ ಮಾಧ್ಯಮ ನೀತಿ ಕುರಿತು ಮಾತನಾಡಲಿದ್ದಾರೆ.