ಮಡಿಕೇರಿ, ಸೆ. 16: ಮೂಢನಂಬಿಕೆ ವಿರುದ್ಧ ಹೋರಾಡಿದ ಹಾಗೂ ಹಿಂದುಳಿದ ವರ್ಗಗಳನ್ನು ಮುಖ್ಯವಾಹಿನಿಗೆ ತರಲು ಶ್ರಮಿಸಿದ ಶ್ರೀ ನಾರಾಯಣ ಗುರುಗಳ ಆದರ್ಶಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಕರೆ ನೀಡಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಬಹಳ ಹಿಂದೆಯೇ ಜಾತಿ ಹಾಗೂ ಮೌಢ್ಯದ ವಿರುದ್ಧ ಹೋರಾಡಿ ಶೋಷಿತರಲ್ಲಿ ಜಾಗೃತಿ ಮೂಡಿಸಿದ್ದಾರೆ ಎಂದು ಶಾಸಕರು ಹೇಳಿದರು.

ದೇಶ ಸೇವೆಯೇ ಈಶ ಸೇವೆ ಎಂಬದನ್ನು ಮನಗಂಡಿದ್ದ ನಾರಾಯಣ ಗುರು ಅವರು ತಿರುವನಂತಪುರಂ ನಿಂದ ಬೆಳಗಾವಿಯವರೆಗೆ ಪಾದಯಾತ್ರೆ ಹಮ್ಮಿಕೊಂಡು ಸಮಾಜದಲ್ಲಿ ಎಲ್ಲರೂ ಸಮಾನರು ಎಂಬ ಸಂದೇಶ ಸಾರಿದ್ದರು ಎಂದು ಅವರು ನುಡಿದರು.

ಜಿ.ಪಂ.ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಮಾತನಾಡಿ ಒಂದೊಂದು ಸಮಾಜದಲ್ಲಿಯೂ ಸಹ ಒಬ್ಬೊಬ್ಬರು ಮಹಾನ್ ದಾರ್ಶನಿಕರು ಇರುತ್ತಾರೆ. ಸಮಾಜದ ಒಳಿತಿಗಾಗಿ ದುಡಿದಿದ್ದಾರೆ. ಎಲ್ಲರೂ ಅಭಿವೃದ್ಧಿಯತ್ತ ಚಿಂತನೆ ಮಾಡಬೇಕಿದೆ. ಹಿಂದಿಗಿಂತ ಇಂದು ಸಾಕಷ್ಟು ಸುಧಾರಣೆ ಮತ್ತು ಬದಲಾವಣೆ ಯಾಗಿದೆ ಎಂದು ಹೇಳಿದರು.

ಸರ್ವೋದಯ ಸಮಿತಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ ಮಾನವ ಕುಲದ ಏಕತೆಗಾಗಿ ಶ್ರಮಿಸಿದ ನಾರಾಯಣ ಗುರು ಅವರು ಸಮಾಜ ಸುಧಾರಕರಾಗಿ ವಿಶ್ವ ಮಾನವತವಾದಿಯಾಗಿದ್ದಾರೆ ಎಂದು ಅವರು ಹೇಳಿದರು.

ಅಸ್ಪøಶ್ಯತೆ ವಿರುದ್ಧ ಹೋರಾಟ ಮಾಡಿದ ಶೋಷಿತ ಸಮಾಜ ಸುಧಾರಣೆಗಾಗಿ ಜೀವನವಿಡೀ ಶ್ರಮಿಸಿದ್ದಾರೆ. ಮೌಢ್ಯಗಳ ವಿರುದ್ಧ ಹೋರಾಟ ಮಾಡಿ ಸಮಾಜ ಸುಧಾರಕರಾಗಿ, ಮಾನವತೆಯ ಏಕತೆಗಾಗಿ ಶ್ರಮಿಸಿದ್ದಾರೆ ಎಂದು ನುಡಿದರು.

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಲೋಕೇಶ್ ಸಾಗರ್ ಮಾತನಾಡಿ ಇಂದಿಗೂ ಸಹ ಜಾತೀಯತೆಯನ್ನು ಕಾಣಬಹು ದಾಗಿದೆ. ಇಂದಿನ ದಿನಗಳಲ್ಲಿಯೂ ಸಹ ವಾಟ್ಸ್‍ಆಪ್ ಸಂದೇಶದಲ್ಲಿ ಎಚ್‍ಐವಿ. ಬಾಧಿತರೊಬ್ಬರ ಸಂದೇಶ ನಿಜಕ್ಕೂ ಆಘಾತ ಉಂಟು ಮಾಡಿತು. ಅವರಲ್ಲಿನ ಜಾತಿ ವ್ಯಾಮೋಹ ಬೇಸರ ತರಿಸಿತು ಎಂದು ಅವರು ಇದೇ ಸಂದರ್ಭದಲ್ಲಿ ನುಡಿದರು.

ಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಯೂನಿಯನ್ (ಎಸ್‍ಎನ್‍ಡಿಪಿ) ಸಂಚಾಲಕ ಕೆ.ಎನ್.ವಾಸು ಮಾತನಾಡಿ ಸಂಘಟನೆಯಿಂದ ಶಕ್ತರಾಗಬೇಕು. ವಿದ್ಯಾರ್ಜನೆಯಿಂದ ಪ್ರಬುದ್ಧರಾಗ ಬೇಕು ಎಂದು ಕರೆ ನೀಡಿದರು.

ಜಿಲ್ಲೆಯಲ್ಲಿ 34 ಎಸ್‍ಎನ್‍ಡಿಪಿ ಶಾಖೆಗಳಿದ್ದು, ಸರ್ಕಾರದಿಂದ ಹಲವು ಸೌಲಭ್ಯಗಳಿದ್ದು, ಅವುಗಳನ್ನು ಬಳಸಿಕೊಳ್ಳುವಂತಾಗಬೇಕು. ಎಲ್ಲಾ ಕಡೆಯೂ ನಾರಾಯಣ ಗುರು ಸಮುದಾಯ ಭವನ ನಿರ್ಮಾಣವಾಗಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸುವಂತೆ ಮನವಿ ಮಾಡಿದರು.

ಜಿಲ್ಲಾ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಬಿ.ವೈ.ಆನಂದ ರಘು ಮಾತನಾಡಿ ನಾರಾಯಣ ಗುರು ಅವರ ಸಂದೇಶಗಳು ಎಲ್ಲೆಡೆ ತಲಪಬೇಕು ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹಾ, ಜಿ.ಪಂ.ಸದಸ್ಯರಾದ ಕಲಾವತಿ ಪೂವಪ್ಪ, ಸುನಿತಾ, ಬಿಲ್ಲವ ಸಮಾಜದ ತಾಲೂಕು ಘಟಕದ ಅಧ್ಯಕ್ಷ ಭಾಸ್ಕರ್, ವಾಸು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಟಿ.ದರ್ಶನ್, ಮಣಜೂರು ಮಂಜುನಾಥ್ ಇತರರು ಇದ್ದರು.