ಮಡಿಕೇರಿ, ಸೆ. 17: ಕುಶಾಲನಗರ ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರಿಗೆ ಪಟ್ಟಣ ಪಂಚಾಯಿತಿ ಸೂಚನೆಯೊಂದನ್ನು ನೀಡಿದೆ. ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ವ್ಯಾಪಾರ ನಿಯಂತ್ರಣ) ನಿಯಮಗಳ 2019 ಅನುಷ್ಠಾನಗೊಳಿಸುವ ಸಂಬಂಧ ನೋಂದಾಯಿತ ಬೀದಿ ಬದಿ ವ್ಯಾಪಾರಿಗಳ ತಾತ್ಕಾಲಿಕ ಮತದಾರರ ಪಟ್ಟಿಯನ್ನು ಪಟ್ಟಣ ಪಂಚಾಯಿತಿ ಕಚೇರಿಯ ಸೂಚನಾ ಫಲಕದಲ್ಲಿ ಪ್ರಚುರಪಡಿಸಲಾಗಿದೆ. ಈ ಪಟ್ಟಿಯಲ್ಲಿ ಏನಾದರೂ ಆಕ್ಷೇಪಣೆ ಇದ್ದಲ್ಲಿ ತಾ. 20ರೊಳಗಾಗಿ ತಕರಾರು ಅರ್ಜಿಯನ್ನು ಪೂರಕ ದಾಖಲಾತಿಗಳೊಂದಿಗೆ ಸಲ್ಲಿಸಲು ಕಾಲಾವಕಾಶ ಇರುತ್ತದೆ. ಅವಧಿ ಮೀರಿ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವದಿಲ್ಲ, ಬೀದಿ ಬದಿ ವ್ಯಾಪಾರಸ್ಥರ ಅಂತಿಮ ಪಟ್ಟಿಯನ್ನು ತಾ. 23 ರಂದು ಪಟ್ಟಣ ಪಂಚಾಯಿತಿ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗುವದು ಎಂದು ತಿಳಿಸಿದೆ.