ಮಡಿಕೇರಿ, ಸೆ. 17: ನಗರದ ನೂತನ ಖಾಸಗಿ ಬಸ್ ನಿಲ್ದಾಣದಿಂದ ಫೀ.ಮಾ. ಕೆ.ಎಂ. ಕಾರ್ಯಪ್ಪ ಕಾಲೇಜಿಗೆ ತೆರಳುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ನಡೆದಾಡಲು ತೊಂದರೆಯಾಗಿದೆ. ಆದ್ದರಿಂದ ಕೂಡಲೇ ರಸ್ತೆಯನ್ನು ದುರಸ್ತಿಗೊಳಿಸುವಂತೆ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷೆ ಡಾ. ಪಾರ್ವತಿ ಅಪ್ಪಯ್ಯ ಹಾಗೂ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸಿ.ವಿ. ಸ್ನೇಹ ಅವರಿಗೆ ಮನವಿ ಸಲ್ಲಿಸುವ ಸಂದರ್ಭ ಹಳೆ ವಿದ್ಯಾರ್ಥಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಬೊಳ್ಳಜಿರ ಬಿ. ಅಯ್ಯಪ್ಪ, ನಿರ್ದೇಶಕ ವಿಘ್ನೇಶ್ ಎಂ. ಭೂತನಕಾಡು ಹಾಜರಿದ್ದರು. ರಸ್ತೆ ದುರಸ್ತಿ ಮಾಡುವಂತೆ ಮಡಿಕೇರಿ ನಗರಸಭೆ ಪೌರಾಯುಕ್ತರಿಗೆ ಸೂಚನೆ ನೀಡಲಾಗುವದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸ್ನೇಹ ಈ ಸಂದರ್ಭ ತಿಳಿಸಿದರು.