ಮಡಿಕೇರಿ, ಸೆ. 16 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ತಾ.17 ರಂದು (ಇಂದು) ವಿಶ್ವಕರ್ಮ ಜಯಂತ್ಯುತ್ಸವ ಸಮಾರಂಭ ನಡೆಯಲಿದೆ.

ಶ್ರೀವಿಶ್ವಕರ್ಮ ಪೂಜೆ : ವಿಶ್ವಕರ್ಮ ಜಯಂತ್ಯುತ್ಸವದ ಪ್ರಯುಕ್ತ ಪೂರ್ವ ಭಾವಿಯಾಗಿ ಕೊಡಗು ಜಿಲ್ಲಾ ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 8.30 ಗಂಟೆಗೆ ಶ್ರೀ ವಿಶ್ವಕರ್ಮ ಪೂಜೆ ನಡೆಯಲಿದೆ.

ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ಜಯಂತ್ಯುತ್ಸವ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಉದ್ಘಾಟಿಸಲಿದ್ದಾರೆ.

ಅಧ್ಯಕ್ಷತೆಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್, ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ, ವೀಣಾಅಚ್ಚಯ್ಯ, ಜಿ.ಪಂ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪಿ., ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯP್ಷÀ ಬಿ.ಎಸ್. ಲೋಕೇಶ್‍ಸಾಗರ್, ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಎಸ್.ಜೆ. ದೇವದಾಸ್, ಸರಸ್ವತಿ ಡಿಎಡ್ ಕಾಲೇಜಿನ ಪ್ರಾಂಶುಪಾಲ ಕುಮಾರ್ ಇತರರು ಪಾಲ್ಗೊಳ್ಳಲಿದ್ದಾರೆ.