ಕುಶಾಲನಗರ, ಸೆ. 17: ಹುಣ್ಣಿಮೆ ಅಂಗವಾಗಿ ಕಾವೇರಿ ಮಹಾ ಆರತಿ ಬಳಗದ ಅಶ್ರಯದಲ್ಲಿ ಕುಶಾಲನಗರದಲ್ಲಿ ಜೀವನದಿ ಕಾವೇರಿಗೆ 98ನೇ ಮಹಾ ಆರತಿ ಕಾರ್ಯಕ್ರಮ ನಡೆಯಿತು.
ಪಟ್ಟಣದ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ ಬಳಿಯ ಕಾವೇರಿ ನದಿ ತಟದ ಆರತಿ ಕ್ಷೇತ್ರದಲ್ಲಿ ಪೂಜಾ ಕಾರ್ಯಕ್ರಮ ನಡೆಯಿತು. ಅರ್ಚಕ ಕೃಷ್ಣಮೂರ್ತಿಭಟ್ ಪೂಜಾ ವಿಧಿ ನೆರವೇರಿಸಿದರು. ಅಷ್ಟೋತ್ತರ, ಮಹಾಮಂಗಳಾರತಿ ಬಳಿಕ ನದಿಗೆ ಸಾಮೂಹಿಕವಾಗಿ ಆರತಿ ಬೆಳಗಲಾಯಿತು.ಕಾವೇರಿ ನದಿ ಸ್ವಚ್ಚತಾ ಆಂದೋಲನ ಸಮಿತಿ ಸಂಚಾಲಕ ಎಂ.ಎನ್. ಚಂದ್ರಮೋಹನ್, ಪ್ರಮುಖರಾದ ವಿ.ಎನ್. ವಸಂತಕುಮಾರ್, ಡಿ.ಆರ್. ಸೋಮಶೇಖರ್, ಕೆ.ಆರ್. ಶಿವಾನಂದ, ಕೆ.ಎಸ್. ಮೂರ್ತಿ, ಸ್ಥಳೀಯ ಮಹಿಳಾ ಭಜನಾ ಮಂಡಳಿ ಸದಸ್ಯರು ಇದ್ದರು. ಕುಶಾಲನಗರದ ಕೊಪ್ಪ ಗೇಟ್ ಸಮೀಪದ ಕಾವೇರಿ ಪ್ರತಿಮೆಗೆ ಬಾರವಿ ಕನ್ನಡ ಅಭಿಮಾನಿ ಸಂಘದ ವತಿಯಿಂದ ಹುಣ್ಣಿಮೆ ಪೂಜಾ ಕಾರ್ಯಕ್ರಮ ಜರುಗಿತು. ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ಆರತಿ ಬೆಳಗಲಾಯಿತು. ಎಸ್‍ಎಲ್‍ಎನ್ ಸಂಸ್ಥೆಯ ಮಾಲೀಕ ಸಾತಪ್ಪನ್, ವಿಶ್ವನಾಥನ್, ಬಾರವಿ ಕನ್ನಡ ಅಭಿಮಾನಿ ಸಂಘದ ಪ್ರಮುಖರಾದ ಬಬಿಂದ್ರ ಪ್ರಸಾದ್. ವಿಜಯೇಂದ್ರ ಪ್ರಸಾದ್ ಮತ್ತಿತರರು ಇದ್ದರು. ಭಕ್ತಾದಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು. ಕುಶಾಲನಗರ ಸಾಯಿ ಬಡಾವಣೆಯ ಸಾಯಿ ಮಂದಿರದಲ್ಲಿ ಹುಣ್ಣಿಮೆ ಅಂಗವಾಗಿ ದೇವರಿಗೆ ಆರತಿ ಬೆಳಗುವ ಮೂಲಕ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು. ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಿತು. ಸ್ಥಳೀಯ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಹುಣ್ಣಿಮೆ ಅಂಗವಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆದು ಮಹಾಮಂಗಳಾರತಿ ನಂತರ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿತು.