ಪೊನ್ನಂಪೇಟೆ, ಸೆ. 17: ವೀರಾಜಪೇಟೆಯ ಕಾವೇರಿ ಪದವಿ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಲಿಖಿತ ಮೈಸೂರಿನ ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜು ಆಯೋಜಿಸಿದ ರಾಜ್ಯ ಮಟ್ಟದ ಗಾಯನ ಸ್ವಧೆರ್Éಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾಳೆ. ರೂ. 3 ಸಾವಿರ ನಗದು ಬಹುಮಾನ ಹಾಗೂ ಪಾರಿತೋಷಕ ಪಡೆದುಕೊಂಡಿದ್ದಾಳೆ. ಅಂತಿಮ ಬಿ.ಕಾಂ ವಿದ್ಯಾರ್ಥಿನಿಯರಾದ ಕವನ ಹಾಗೂ ವಿನಿಷ ಚರ್ಚಾ ಸ್ವರ್ದೆಯಲ್ಲಿ ಸಮಾಧಾನಕರ ಬಹುಮಾನ ಪಡೆದುಕೊಂಡಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲೆ ಪ್ರೊ. ಕಮಲಾಕ್ಷಿ ತಿಳಿಸಿದ್ದಾರೆ.