ಮಡಿಕೇರಿ, ಸೆ. 18: ಗಾಳಿಬೀಡು ಜವಾಹರ ನವೋದಯ ವಿದ್ಯಾಲಯಕ್ಕೆ 2020-21ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಪಡೆಯಲು ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರವೇಶ ಬಯಸುವ ವಿದ್ಯಾರ್ಥಿಗಳು ನವೋದಯ ವಿದ್ಯಾಲಯ ಸಮಿತಿಯ ವೆಬ್‍ಸೈಟ್ ತಿತಿತಿ.ಟಿಚಿvoಜಚಿಜಚಿಜಚಿಥಿಚಿ.gov.iಟಿ ನಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ತಾ. 30 ರ ಅವಧಿ ವಿಸ್ತರಿಸಲಾಗಿದೆ. ಪರೀಕ್ಷೆಯು 2020ರ ಜನವರಿ 11 ರಂದು ನಡೆಯಲಿದೆ. ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಕೋರಿದ್ದಾರೆ.