ಮಡಿಕೇರಿ, ಸೆ. 18 : ಸುಂಟಿಕೊಪ್ಪ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಮಹಾಸಭೆ ತಾ. 21 ರಂದು ಬೆಳಿಗ್ಗೆ 11 ಗಂಟೆಗೆ ಗುಂಡುಗುಟ್ಟಿ ಮಂಜುನಾಥಯ್ಯ ಸಹಕಾರ ಭವನದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ಎನ್.ಸಿ. ಪೊನ್ನಪ್ಪ ಕ್ಲೈವಾ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಎಲ್ಲ ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಳ್ಳುವಂತೆ ಆಡಳಿತ ಮಂಡಳಿ ಮನವಿ ಮಾಡಿದೆ. ಹೆಚ್ಚಿನ ಮಾಹಿತಿಗೆ 99004 80302ನ್ನು ಸಂಪರ್ಕಿಸಬಹುದಾಗಿದೆ.