ಕುಶಾಲನಗರ, ಸೆ. 16: ಕುಶಾಲನಗರ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆ ತಾ. 22 ರಂದು ನಡೆಯಲಿದೆ. ಸಂಘದ ಉಪಾಧ್ಯಕ್ಷರಾದ ಕೆ.ಎಂ.ಭೋಜಪ್ಪ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10 ಗಂಟೆಗೆ ಗುಮ್ಮನಕೊಲ್ಲಿಯಲ್ಲಿರುವ ಸಂಘದ ಸಣ್ಣಪ್ಪ ಸಭಾಂಗಣದಲ್ಲಿ ಸಭೆ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಎಸ್.ಆರ್.ಮಾದಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.