ಮಡಿಕೇರಿ, ಸೆ. 18: ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. 21 ರಂದು ಸೋಮವಾರಪಟೆ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಅಹವಾಲು ಸಭೆ ಏರ್ಪಡಿಸಲಾಗಿದೆ.

ಅಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಗಳನ್ನು ವಿತರಿಸಲಿರುವರು. ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಠಾಣೆ, ಗೌಳಿಬೀದಿ, ಮಡಿಕೇರಿ 08272-220797 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತದ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.