ಮಡಿಕೇರಿ, ಸೆ.18 : ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ತಾ. 23 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.ಅಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಮಾಡಲಿದ್ದಾರೆ. ನಂತರ ಪ್ರಕೃತಿ ವಿಕೋಪದಿಂದಾದ ಹಾನಿ ಹಾಗೂ ಕೈಗೊಂಡ ಪರಿಹಾರ ಕಾರ್ಯಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 12 ಗಂಟೆಗೆ ಕಾವೇರಿ ತುಲಾ ಸಂಕ್ರಮಣ ಜಾತ್ರೆಗೆ ಸಂಬಂಧಪಟ್ಟಂತೆ ಪೂರ್ವ ಸಿದ್ಧತಾ ಸಭೆ, ಬಳಿಕ ಮಧ್ಯಾಹ್ನ 12.30 ಗಂಟೆಗೆ ಮಡಿಕೇರಿ ದಸರಾ ಜನೋತ್ಸವ ಸಂಬಂಧಪಟ್ಟಂತೆ ಪೂರ್ವ ಸಿದ್ಧತಾ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 2 ಗಂಟೆಯಿಂದ 5 ಗಂಟೆಯವರೆಗೆ ಮಡಿಕೇರಿ ಹಾಗೂ ಸೋಮವಾರಪೇಟೆ ತಾಲೂಕು ವ್ಯಾಪ್ತಿಯ ಮದೆ, ಕರ್ಣಂಗೇರಿ, ಜಂಬೂರು ಗ್ರಾಮಗಳಲ್ಲಿ ಪ್ರಕೃತಿ ವಿಕೋಪ ಸಂತ್ರಸ್ತರಿಗೆ ನಿರ್ಮಿಸಲಾಗುತ್ತಿರುವ ಮನೆಗಳ ನಿರ್ಮಾಣ ಕಾಮಗಾರಿಗಳಿಗೆ ಸಂಬಂಧಪಟ್ಟಂತೆ ಸ್ಥಳ ಭೇಟಿ ಹಾಗೂ ಪರಿಶೀಲನೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.