ವೀರಾಜಪೇಟೆ, ಸೆ. 18: ಯಾವದೇ ಒಂದು ಸಮುದಾಯವು ಪ್ರಗತಿ, ಏಳಿಗೆಯನ್ನು ಕಾಣ ಬೇಕಾದರೆ ಸಮಾಜದ ಪ್ರತಿಯೊಬ್ಬರೂ ಸುಶಿಕ್ಷಿತರಾಗಬೇಕು. ಸಮುದಾಂiÀiದ ಮಕ್ಕಳಿಗೂ ಶಿಕ್ಷಣ ನೀಡಬೇಕು ಎಂದು ಮಡಿಕೇರಿ ಆಕಾಶವಾಣಿ ಉದ್ಘೋಷಕ ಸುಬ್ರಾಯ ಸಂಪಾಜೆ ಹೇಳಿದರು.

ವೀರಾಜಪೇಟೆ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಆಡಳಿತ ಹಾಗೂ ವಿಶ್ವಕರ್ಮ ಸಮಾಜ ಸೇವಾ ಸಂಘದ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ಪುರಭವನದ ಸಭಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ ಭಗವಾನ್ ವಿಶ್ವಕರ್ಮ ಜಯಂತ್ಯುತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅವರು ಭಗವಾನ್ ವಿಶ್ವಕರ್ಮ ಇಡೀ ಜಗತ್ತನ್ನು ಸೃಷ್ಟಿಸಿದ ದೇವರು ಎಂ¨ ಪ್ರತೀತಿ ಇದೆ. ವಿಶ್ವಕರ್ಮನನ್ನು ಜನಾಂಗದವರು ಮಾತ್ರ ಪೂಜಿಸುವದಲ್ಲ. ಪ್ರತಿಯೊಂದು ಸಮುದಾಯವು ಭಗವಾನ್ ವಿಶ್ವಕರ್ಮನನ್ನು ಪೂಜಿಸಬಹುದಾಗಿದೆ ಎಂದರು.

ಸಭೆಯನ್ನುದ್ದೇಶಿಸಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಷಣ್ಮುಗ, ತಾಲೂಕು ಕಚೇರಿಯ ಉಪ ತಹಶೀಲ್ದಾರ್ ಎಚ್.ಎಸ್. ಪೊನ್ನು, ಲಕ್ಷ್ಮಣ್ ಆಚಾರ್ಯ, ಮಂಜುನಾಥ್ ಆಚಾರ್ಯ, ಉಪನ್ಯಾಸಕ ಕೆ.ಭೋಜರಾಜ್ ಆಚಾರ್ಯ ಮಾತನಾಡಿದರು. ವೇದಿಕೆಯಲ್ಲಿ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ಶಂಕರ್, ಗಾಯತ್ರ್ರಿ ಕೃಷ್ಣ ಉಪಸ್ಥಿತರಿದ್ದರು. ವೀರಾಜಪೇಟೆ ತಾಲೂಕು ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ಎ.ಪಿ.ಲೋಕೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿ ಸಮುದಾಯ ಶಿಕ್ಷಣಕ್ಕೆ ಒತ್ತುಕೊಡಲು ಸಮುದಾಯ ಬಾಂಧವರು ಸಂಘದೊಂದಿಗೆ ಶ್ರಮಿಸಬೇಕು ಎಂದು ಹೇಳಿದರು.